ಕಲಬುರಗಿ: ಕಲ್ಯಾಣ ಕರ್ನಾಟಕದ ಪ್ರಸಿದ್ಧ ಸೂಫಿ ಸಂತ ಹಜರತ್ ಖಾಜಾ ಬಂದಾ ನವಾಜ್ (ರ.ಅ) ದರ್ಗಾದ ಪೀಠಾಧಿಪತಿ ಹಾಗೂ ಕೆ.ಬಿ.ಎನ್ ವಿಶ್ವ ವಿದ್ಯಾಲಯದ ಕುಲಪತಿ ವಿದ್ವಾಂಸಕರಾಗಿದ್ದ ಡಾ. ಸೈಯದ್ ಷಾ ಖ್ರುಸ್ರೋ ಹುಸೈನಿ ಸಾಹೇಬ್ ಅವರು ತಮ್ಮ 79ನೆಯ ವಯಸ್ಸಿನ ವಯೋಸಹಜವಾಗಿ ನಿಧನರಾಗಿದ್ದಾರೆ.
ಇಬ್ಬರು ಗಂಡು ಮತ್ತು ಮೂವರು ಹೆಣ್ಣುಮಕ್ಕಳನ್ನು ಅಗಲಿದ ಇವರು ಚಿಸ್ತಿ ಮತ್ತು ಸೂಫಿ ಪರಂಪರೆಯ ಪ್ರಮುಖ ವ್ಯಕ್ತಿಯಾಗಿದ್ದರು. ಪ್ರಸಿದ್ಧ ಸೂಫಿ ಸಂತ ಹಜರತ್ ಖಾಜಾ ಬಂದನವಾಜ್ (ರ.ಅ) ಅವರ 23 ನೇ ನೇರ ವಂಶಸ್ಥರಾಗಿದ್ದ ಡಾ. ಸೈಯದ್ ಷಾ ಖುಸ್ರೋ ಹುಸೇನಿ ಅವರು ತನ್ನ ಆಳವಾದ ಆಧ್ಯಾತ್ಮಿಕತೆಗೆ ಮಾತ್ರವಲ್ಲದೆ ಬೌದ್ಧಿಕ ಕೊಡುಗೆಗಳಿಗಾಗಿಯೂ ಹೆಸರುವಾಸಿಯಾಗಿದ್ದರು.
ಶೈಕ್ಷಣಿಕ ತಜ್ಞರು ಮತ್ತು ನ್ಯಾಯವಾದಿ ಆಗಿದ್ದ ಇವರು KBN ವಿಶ್ವವಿದ್ಯಾಲಯದ ಕುಲಪತಿಯಾಗಿ ಸೇವೆ ಸಲ್ಲಿಸಿದ್ದರು. ಆಧುನಿಕ ತಂತ್ರಜ್ಞಾನದೊಂದಿಗೆ ಸೂಫಿ ಪರಂಪರೆಯ ಸೇತುವೆ ಆಗಿ ನಿರಂತರವಾಗಿ ದೇಶದ ವಿವಿಧ ಭಾಗಗಳಲ್ಲಿ ಇಂದಿನ ಪೀಳಿಗೆಗಳಿಗೆ ಸೂಫಿ ಪರಂಪರೆಯನ್ನು ತಿಳಿಸುವ ಸಮ್ಮೇಳನಗಳು ಮತ್ತು ಕಾರ್ಯಕ್ರಮ ನಡೆಸುತ್ತಿದ್ದರು.
ಅವರ ಜೀವನವು ಆಧ್ಯಾತ್ಮಿಕತೆ, ಸಂಸ್ಕೃತಿಕತೆಯಿಂದ ಕುಡಿದ್ದು ಅವರ ಪೂಜ್ಯ ಪೂರ್ವಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದರು. ಪ್ಯೂಜರ ನಿಧನದಿಂದ ಅವರ ಅಪಾರ ಅನುಯಾಯಿ ಮತ್ತು ಸೂಫಿ ಸಮುದಾಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ. Kalburaginew