ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಪ್ರಮುಖವಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 1 ಕೋಟಿ 17 ಲಕ್ಷ ಮಹಿಳೆಯರ ಖಾತೆಗೆ ಹಣ ಸಂದಾಯವಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನವೆಂಬರ್ ತಿಂಗಳಿನ ಹಣ ಈಗಾಗಲೇ ಬಿಡುಗಡೆಯಾಗಿದೆ. ಇನ್ನು ಡಿಸೆಂಬರ್ ತಿಂಗಳಿನ ಹಣ ಜನವರಿ 5ನೇ ತಾರೀಖಿನಿಂದ ಎಲ್ಲ ಅರ್ಹ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಈವರೆಗೆ ಒಂದೂವರೆಯಿಂದ 2 ಲಕ್ಷ ಜನರಿಗೆ ಮಾತ್ರ ಖಾತೆಗೆ ₹2,000 ಹಣ ಜಮೆಯಾಗಿಲ್ಲ. ಸಣ್ಣ ಪುಟ್ಟ ವ್ಯತ್ಯಾಸ ಕಂಡುಬಂದರೂ ಅದನ್ನು ಶೀಘ್ರ ಪರಿಹಾರ ಕಂಡುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.