ನ.10ರಂದು ವಿಶ್ವಗುರು ಬಸವಣ್ಣನವರ ಮೂರ್ತಿ ಅನಾವರಣ: ಯಂಕಂಚಿ

Date:

Share post:

ಕಲಬುರಗಿ: ಆಳಂದ ತಾಲೂಕಿನ ಭೂಸನೂರಿನಲ್ಲಿ ಸ್ಥಾಪಿಸಲಾದ ನೀಲಾಂಬಿಕಾ ಕಲ್ಯಾಣ ಮಂಟಪ ಉದ್ಘಾಟನಾ ಸಮಾರಂಭ ಹಾಗೂ ವಿಶ್ವಗುರು ಬಸವಣ್ಣನವರ ಮೂರ್ತಿ ಅನಾವರಣ ಕಾರ್ಯಕ್ರಮವನ್ನು ನವೆಂಬರ್ 10ರಂದು ಹಮ್ಮಿಕೊಳ್ಳಲಾಗಿದೆ ಎಂದು ಬಸವ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಯಂಕಂಚಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಶರಣರ ಕಾಯಕ ಜೀವನ ಪ್ರವಚನ ಕಾರ್ಯಕ್ರಮವನ್ನು ಹುಲಸೂರಿನ ಶಿವಾನಂದ ಮಹಾಸ್ವಾಮಿಗಳು ಉದ್ಘಟಿಸಿದ್ದಾರೆ, ಈ ಪ್ರವಚನ ಕಾರ್ಯಕ್ರಮ ನ.10ರವರೆಗೆ ನಡೆಯಲಿದೆ. ಅದರಂತೆ ನ.10ರಂದು ನಡೆಯಲಿರುವ ನೀಲಂಬಿಕಾ ಕಲ್ಯಾಣ ಮಂಟಪ ಮತ್ತು ವಿಶ್ವಗುರು ಬಸವಣ್ಣನವರ ಮೂರ್ತಿ ಅನಾವರಣ ಕಾರ್ಯಕ್ರಮಕ್ಕೆ ಭಾಲ್ಕಿಯ ಡಾ. ಬಸವಲಿಂಗ ಪಟ್ಟದೇವರು ದಿವ್ಯ ಸಾನಿಧ್ಯ ವಹಿಸುವರು, ಈ ವೇಳೆಯಲ್ಲಿ ಗುರು ಮಹಾಂತ ಸ್ವಾಮಿಗಳು, ಶಿವಾನಂದ ಸ್ವಾಮೀಜಿ, ಗುರುಮುರುಘ ರಾಜೇಂದ್ರ ಮಹಾಸ್ವಾಮೀಜಿ ಸೇರಿದಂತೆ ಮತ್ತಿತರರ ಗಣ್ಯರು ಉಪಸ್ಥಿತರಿರುವರು ಎಂದರು.

ಸಚಿವ ಸತೀಶ್ ಜಾರಕಿಹೊಳಿ ಅವರು ಸಮಾರಂಭವನ್ನು ಉದ್ಘಾಟಿಸುವರು, ಡಾ. ಶರಣಪ್ರಕಾಶ್ ಪಾಟೀಲ್ ಅವರು ಬಸವಣ್ಣನವರ ಮೂರ್ತಿಯನ್ನು ಅನಾವರಣಗೊಳಿಸುವರು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಸಲಹೆಗಾರರು ಹಾಗೂ ಶಾಸಕರಾಗಿರುವ ಬಿ.ಆರ್.ಪಾಟೀಲ್, ಡಾ. ಅಜಯ್ ಸಿಂಗ್, ಸಂಸದ ರಾಧಾಕೃಷ್ಣ ದೊಡ್ಡಮನಿ, ಸಾಗರ ಖಂಡ್ರೆ, ಅಲ್ಲಮಪ್ರಭು ಪಾಟೀಲ್, ಎಂ.ವೈ ಪಾಟೀಲ್ ಸೇರಿದಂತೆ ಇತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.ವಿಶ್ವಗುರು

ಈ ಸಂದರ್ಭದಲ್ಲಿ ಬಾಬುರಾವ್ ಪಾಟೀಲ್, ರೇವಣಸಿದ್ಯಯ್ಯ ಮಠ, ಬಾಬುರಾವ್ ಗೊಬ್ಬುರ್, ಭೀಮಶೆಟ್ಟಿ ಪಾರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಇಬ್ಬರು ಸಾವು!

ಕಲಬುರಗಿ: ಕಾರು ಮತ್ತು ಲಾರಿಯ ಮಧ್ಯೆ ಪರಸ್ಪರ ಢಿಕ್ಕಿಯಾಗಿ ಸಂಭವಿಸಿದ ಭೀಕರ...

ರಾಜ್ಯದ ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ 

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್....

ಕಲಬುರಗಿಯ ಕಮಲಾಪುರದಲ್ಲಿ ಭೀಕರ ಅಪಘಾತ; ನಾಲ್ವರ ಸಾವು!

ಕಲಬುರಗಿ: ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ...

ಶಕುಂತಲಾ ಬಸವರಾಜ ಭೀಮಳ್ಳಿ ಇನ್ನಿಲ್ಲ, ಶಾಲೆಗೆ ರಜೆ ಘೋಷಣೆ

ಕಲಬುರಗಿ: ನಗರದ ಮಕ್ಕಂಪುರ ಬಡಾವಣೆ ನಿವಾಸಿ, ಮದರ್ ತೆರೇಸಾ ಶಾಲೆಯ ಆಡಳಿತ...