ಲೋಕಸಭಾ ಚುನಾವಣೆಗೆ ಬಿಜೆಪಿ ಇಂದು ತನ್ನ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಭಾರೀ ನಿರೀಕ್ಷೆ ಹುಟ್ಟಿಸಿದ ಬೆಳಗಾವಿ ಲೋಕ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕೆ ಇಳಿಸಿದೆ. ಉಳಿದಂತೆ ರಾಯಚೂರಿನಲ್ಲಿ ಹಾಲಿ ಸಂಸದ ಅಮರೇಶ್ ನಾಯಕ್ ಅವರಿಗೆ ಮತೊಮ್ಮೆ ಟಿಕೆಟ್ ನೀಡಲಾಗಿದೆ.
ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವ ಕೆ.ಸುಧಾಕರ್ ಅವರಿಗೆ ನೀಡಿದರೆ ಉತ್ತರ ಕನ್ನಡಕ್ಕೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಬದಲಿಗೆ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರಿಗೆ ಕಣಕ್ಕೆ ಇಳಿಸಿದೆ.
ಇನ್ನುಳಿದಂತೆ ಕೋಲಾರ, ಮಂಡ್ಯ & ಹಾಸನ ಕ್ಷೇತ್ರಗಳಿಗೆ ಮೈತ್ರಿ ಪಕ್ಷ ಜೆಡಿಎಸ್ ಸ್ಪರ್ಧಿಸಲು ಅವಕಾಶ ನೀಡಿದೆ.