ಸಿಎಂ ಬದಲಾವಣೆ ಕೇವಲ ಊಹಾಪೋಹ: ಸಚಿವ ಪಾಟೀಲ್

Date:

Share post:

ಕಲಬುರಗಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ಊಹಾಪೋಹ ಯಾರು ಯಾರಿಗಾದರೂ ಭೇಟಿಯಾಗುವುದು ಬಿಡೋದು ಅವರ ವೈಯಕ್ತಿಕ ವಿಚಾರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.

ನಗರದಲ್ಲಿ ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೋಳಿ ಮೈಸೂರಿನಲ್ಲಿ ಸೌಜನ್ಯಯುತವಾಗಿ ಕೆಲ ನಾಯಕರನ್ನು ಭೇಟಿಯಾಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹೊಡೆತ ಎಂಬ ಶಾಸಕ ರಾಜು ಕಾಗೆ ಹೇಳಿಕೆ ವೈಯಕ್ತಿಕವಾಗಿದ್ದು, ಅದನ್ನು ವೈಭವಿಕರಿಸುವ ಅಗತ್ಯವಿಲ್ಲ ಎಂದರು.

ಬಳಿಕ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ವಿಚಾರ ಪ್ರತಿಕ್ರಿಯಿಸಿದ ಅವರು, ಕೇಸ್‌ಗಳನ್ನ ವಾಪಸ್ ಪಡೆಯೋದು ಸರ್ಕಾರದ ಮಟ್ಟದಲ್ಲಿ ನಡೆಯುವ ಒಂದು ಪ್ರಕ್ರಿಯೆ. ಯಾರೋ ಹೇಳ್ತಾರೆ ಅಂತ ಸರ್ಕಾರ ಕೇಸ್ ವಾಪಸ್ ಪಡೆಯವುದಿಲ್ಲ, ಕ್ಯಾಬಿನೆಟ್ ಸಬ್ ಕಮಿಟಿಯಲ್ಲಿ ಚರ್ಚೆ ನಡೆದ ಬಳಿಕ ಕೇಸ್ ವಾಪಸ್ ಬಗ್ಗೆ ಸರ್ಕಾರ ನಿರ್ಧರಿಸಿದೆ. ಸಂಬಂಧವಿಲ್ಲದ, ನಿರಾಪರಾಧಿಗಳ ಮೇಲಿನ ಕೇಸ್ ವಾಪಸ್ ಪಡೆಯಲಾಗಿದೆ. ಈ

ಗಲಭೆಯಲ್ಲಿ ಸಾಕಷ್ಟು ಜನ ಅಮಾಯಕರು ಸಿಲುಕಿಕೊಂಡಿದ್ದರು. ಅಂತವರ ಮೇಲೆ ಸಹ ಆ ಸಂದರ್ಭದಲ್ಲಿ ಕೇಸ್ ಹಾಕಲಾಗಿತ್ತು. ಹುಬ್ಬಳ್ಳಿ ಗಲಭೆ ಪ್ರಕರಣ ಒಂದೇ ಅಲ್ಲ, ವಿವಿಧ ಪ್ರಕರಣಗಳಲ್ಲಿ 43 ಕೇಸ್‌ಗಳನ್ನ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಭೀಕರ ಅಪಘಾತ ಮೂವರು ಸ್ಥಳದಲ್ಲೇ ಸಾವು!

ಕಲಬುರಗಿ: ಕಬ್ಬಿನ ಲಾರಿ, ಟೆಂಪೋ ಮತ್ತು ಬೈಕ್ ನಡುವೆ ನಡುವೆ ಸಂಭವಿಸಿದ...

ಕಲಬುರಗಿ| ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಇಬ್ಬರು ಸಾವು!

ಕಲಬುರಗಿ: ಕಾರು ಮತ್ತು ಲಾರಿಯ ಮಧ್ಯೆ ಪರಸ್ಪರ ಢಿಕ್ಕಿಯಾಗಿ ಸಂಭವಿಸಿದ ಭೀಕರ...

ರಾಜ್ಯದ ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ 

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್....

ಕಲಬುರಗಿಯ ಕಮಲಾಪುರದಲ್ಲಿ ಭೀಕರ ಅಪಘಾತ; ನಾಲ್ವರ ಸಾವು!

ಕಲಬುರಗಿ: ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ...