ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತೀವ್ರ ಎದೆನೋವಿನಿಂದಹೃದಯಾಘಾತದಿಂದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವೇ ಕ್ಷಣಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.
AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತರಾಗಿದ್ದ ಇವರು, ಇತ್ತೀಚೆಗೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ವಿದ್ಯಾರ್ಥಿಯಾಗಿದ್ದಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಬಳಿಕ ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಪ್ರವೇಶಿಸಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಇವರ ನಿಧನದ ಸುದ್ದಿ ತಿಳಿದ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಗಣ್ಯರು ಸಂತಾಪ ಸೂಚಿಸಿದ್ದಾರೆ.