ಕಲಬುರಗಿ: ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಇಂದು (ಶನಿವಾರ) ಬೆಳಗ್ಗೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಸಮೀಪ ನಡೆದಿದೆ.gulbargacrim
ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55), ಅವರ ಪತ್ನಿ ಸಂಗೀತ (45), ಪುತ್ರ ಉತ್ತಮ್ ರಾಘವನ್ (28) ಮೃತಪಟ್ಟವರು ಎಂದು ತಿಳಿದು ಬಂದಿದೆ. ಕಾರು ಚಾಲಕನ ಗುರುತು ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.
ಕಾರಿನಲ್ಲಿದ್ದವರು ಅಫಜಲಪುರ ತಾಲ್ಲೂಕಿನ ಗಾಣಗಾಪುರ್ ದತ್ತನ ದರ್ಶನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಸಿಪಿಐ ಶಿವಶಂಕರ್ ಸಾಹು, ಪಿಎಸ್ಐ ಆಶಾ ರಾಥೋಡ್, ಸಿಬ್ಬಂದಿಯಾದ ಕಿಶನ್, ಕುಪೇಂದ್ರ ಮತ್ತಿತರ ಸಿಬ್ಬಂದಿ ಸೇರಿ ಮೃತರನ್ನು ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.