ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಇಂದು ‘ಚಲೋ ಡೆಲ್ಲಿ’ ಹಮ್ಮಿಕೊಂಡಿದೆ. ದೆಹಲಿಯಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಸಿಎಂ, ಇದು ರಾಜಕೀಯ ಹೋರಾಟವಿಲ್ಲ, ಕನ್ನಡಿಗರ ಹಿತ ಕಾಪಾಡುವ ದೊಡ್ಡ ಚಳುವಳಿಯಾಗಿದೆ ಎಂದು ಹೇಳಿದ್ದಾರೆ.
ಇಡೀ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೆಯ ರಾಜ್ಯ ನಮ್ಮದಾಗಿದೆ. ಒಟ್ಟು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. ಅದರಲ್ಲಿ 100 ರೂಪಾಯಿ ತೆರಿಗೆ ಕಟ್ಟಿದರೆ, ಅದಕ್ಕೆ ಕೇವಲ ೧೨ ರೂಪಾಯಿ ಮಾತ್ರ ನಮಗೆ ಬರುತ್ತಿದೆ. ಹಾಗಾಗಿ ನಮಗೆ ಬರುವ 40% ರಿಂದ 50% ರಷ್ಟು ತೆರಿಗೆ ಪಾಲು ಕೊಡಬೇಕು ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಶ್ವೇತ ಪತ್ರ ಹೊರಡಿಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
read more:
2. ಗಣರಾಜ್ಯೋತ್ಸವ ಪರೇಡ್ನಲ್ಲಿ ಕನ್ನಡತಿ ಆಯ್ಕೆ!