ಪಿಕ್ ಅಪ್ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸುಗರ್ ಛಾಪ್ರಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ತಲುಪಿದ್ದಾರೆ
ಗಾಯಾಳುಗಳನ್ನು ಅಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ಅಪಘಾತಕ್ಕೆ ಒಳಗಾದ ನಾಲ್ವರನ್ನು ವಾರಣಾಸಿಗೆ ರವಾನಿಸಲಾಗಿದೆ.
ಮೊನ್ನೆಯಷ್ಟೇ ಬಿಹಾರದ ಕೈಮೂರ್ ಜಿಲ್ಲೆಯ ದೇವಕಲಿ ಗ್ರಾಮದ ಬಳಿಯ ಅಪಘಾತದಲ್ಲಿ ಒಟ್ಟು 9 ಜನ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಟ್ರಾಕ್ಟರ್-ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ.