ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆಗೊಳಿಸಿದೆ. ಇದರಲ್ಲಿ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಅವರಿಗೂ ಈ ಬಾರಿ ಟಿಕೆಟ್ ಘೋಷಿಸಲಾಗಿದೆ.
kangana ranaut
ಕೆಲವು ವರ್ಷಗಳಿಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಹೊಗಳುತ್ತಾ ಬಂದಿರುವ ಅವರನ್ನು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಣಕ್ಕೆ ಇಳಿಸಿದೆ.
ಬಿಜೆಪಿ 5ನೇ ಪಟ್ಟಿ ಪ್ರಕಟ ಶೆಟ್ಟರ್ ಗೆ ಸ್ಥಾನ
ಈ ಸುದ್ದಿಯಿಂದಾಗಿ ನಟಿ ಕಂಗನಾ ಅಭಿಮಾನಿಗಳಿಗೆ ಫುಲ್ ಖುಷಿಯಾಗಿದೆ. ಕಳೆದ ಬಾರಿಗಿಂತ ಈ ಸಲ ಹೆಚ್ಚಿನ ನಟ, ನಟಿಯರು ಸೇರಿದಂತೆ ಟೀಮ್ ಇಂಡಿಯಾ ಕ್ರಿಕೆಟಿಗರೂ ಸಹ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.