ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಜನಾರ್ದನ್ ರೆಡ್ಡಿ ಅವರು ಮತ್ತೆ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಆರ್ ಪಿಪಿ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿ, ಗೆಲುವು ಸಾಧಿಸಿದ್ದರು. ಬಳಿಕ ಮತ್ತೆ ಬಿಜೆಪಿಗೆ ಸೇರುವುದು ಪಕ್ಕಾ ಎಂದು ಸುದ್ದಿ ಹರಿದಾಡಿತ್ತು. ಇವುಗಳ ಊಹಾಪೋಹಗಳಿಗೆ ಇಂದು ಅಂತ್ಯ ಹಾಡಿ ಕಮಲ ಹಿಡಿದಿದ್ದಾರೆ.
ನಿನ್ನೆಯಷ್ಟೇ ರೆಡ್ಡಿ ಅವರ ಮತ್ತೆ ಮಾತೃ ಪಕ್ಷ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿತ್ತು. ಇದಾದ ಬಳಿಕ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮತ್ತೆ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಶ್ರೀರಾಮುಲು ಸೇರಿದಂತೆ ಅನೇಕ ಬಿಜೆಪಿಯ ಹಿರಿಯ ನಾಯಕರು ಉಪಸ್ಥಿತರಿದ್ದರು. ಲೋಕಸಭಾ ಚುನಾವಣೆಗೆ ರೆಡ್ಡಿಯನ್ನು ಗಾಳ ಹಾಕಲಾಗಿದೆ ಎನ್ನಲಾಗುತ್ತಿದೆ.