ಹಿಂದಿ ಅವತರಣಿಕೆಯ ಬಿಗ್ಬಾಸ್ ವಿಜೇತ ಮುನಾವರ್ ಫಾರೂಖಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಆತನನ್ನು ಯಾಕೆ ರಾತ್ರೋ ರಾತ್ರಿ ಬಂಧಿಸಲಾಗಿದೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು. ಇದೀಗ ಪೊಲೀಸರು ಅದನ್ನು ಬಹಿರಂಗಪಡಿಸಿದ್ದಾರೆ.
ಮುಂಬೈ ಪ್ರದೇಶವೊಂದರಲ್ಲಿ ನಿಖರ ಮಾಹಿತಿ ಮೇರೆಗೆ ಹುಕ್ಕಾ ಬಾರ್, ಹುಕ್ಕಾ ಪಾಪ್ಯೂಲರ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮುನಾವರ್ ಫಾರೂಖಿ ಸೇರಿದಂತೆ ಇನ್ನೂ 14 ಜನರನ್ನು ಬಂಧಿಸಿದ್ದರು.
SSLC ಪರೀಕ್ಷೆಯಲ್ಲಿ ಅಕ್ರಮ.. ಇಬ್ಬರು ಮೇಲ್ವಿಚಾರಕರು ಅಮಾನತು
ದಾಳಿ ಮಾಡುತ್ತಿದ್ದ ವೇಳೆ ಮುನಾವರ್ ಕೂಡ ಸ್ಥಳದಲ್ಲೇ ಇದ್ದಿದ್ದರಿಂದ ಆತನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ಬಳಿಕ ಇಂದು ಬೆಳಿಗ್ಗೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯ ವೇಳೆ 13,500 ಮೌಲ್ಯದ ಹುಕ್ಕಾ ಪಾಟ್ಗಳು, 4500 ರೂಪಾಯಿ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.