ನಾಡಿನ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ(96) ಅವರು ಇಂದು ಬೆಳಗ್ಗೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ್ದಾರೆ.
ಸಾಹಿತಿ ಗುರುಲಿಂಗ ಕಾಪಸೆ ಮೂಲ ಊರು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಎಂಬ ಗ್ರಾಮವಾಗಿದೆ. ಸದ್ಯ ಧಾರವಾಡದ ಸಪ್ತಾಪುರ ದುರ್ಗಾ ನಗರದಲ್ಲಿ ವಾಸಿಸುತ್ತಿದ್ದರು.
ಕಾಪಸೆ ಅವರು ಕನ್ನಡ ಸಾಹಿತ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ . ದ.ರಾ ಬೇಂದ್ರೆ ಅವರ ಒಡನಾಡಿಗಳಾಗಿದ್ದ ಇವರು, ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದರು.
ಬಿಗ್ಬಾಸ್ ವಿನ್ನರ್ ಮುನಾವರ್ ಫಾರೂಖಿಯನ್ನು ಪೊಲೀಸರು ಬಂಧಿಸಿದ್ದೇಕೆ?
ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಇವರಿಗೆ ಸಂದಿವೆ.
ಕಾಪಸೆ ಅವರು, ‘ಮಧುರ ಚೆನ್ನ’, ‘ಅಕ್ಕಮಹಾದೇವಿ’, ‘ಅರವಿಂದರು’, ‘ಬಸವೇಶ್ವರ’, ‘ಹಲಸಂಗಿ ಗೆಳೆಯರು’ ಸೇರಿ ಕನ್ನಡದಲ್ಲಿ ಹಲವು ಕೃತಿಗಳನ್ನು ನೀಡಿದ್ದಾರೆ. ಅಲ್ಲದೆ, ಇವರು ಮರಾಠಿ ಭಾಷೆಯಿಂದ ಹಲವು ಕೃತಿಗಳನ್ನು ಕನ್ನಡ ಭಾಷೆಗೆ ಅನುವಾದವೂ ಮಾಡಿದ್ದಾರೆ.