ಹಿಮಾಚಲ ಪ್ರದೇಶದ ಚಂಬಾದಲ್ಲಿ ಇಂದು ಪ್ರಬಲ ಭೂಮಿ ಕಂಪಿಸಿರುವ ಅನುಭವವಾಗಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದ್ದು, ಭೂಕಂಪನದ ಕೇಂದ್ರಬಿಂದು 10 Km ಆಳದಲ್ಲಿತ್ತು ಎಂದು ಅದು ಹೇಳಿದೆ. ಈ ಘಟನೆಯು ಇಂದು ರಾತ್ರಿ 9.34 ಗಂಟೆಗೆ ಭೂಕಂಪನವಾಗಿದ್ದು, ಘಟನೆಯಿಂದ ಪ್ರಾಣ ಹಾನಿಯಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ತಿಳಿದುಬಂದಿದೆ.
ಕೆಲವು ದಿನಗಳ ಹಿಂದಷ್ಟೇ ತೈವಾನ್ & ಜಪಾನ್ ದೇಶಗಳಲ್ಲಿ ಪ್ರಬಲ ಭೂಮಿ ಕಂಪಿಸಿರುವ ಅನುಭವಾಗಿದೆ. ತೈವಾನ್ ನಲ್ಲಿ ಸಂಭವಿಸಿರುವ ಭೂಕಂಪದಲ್ಲಿ ಅನೇಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.