ಕಲಬುರಗಿ: ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈಯ್ದು ಶವವನ್ನು ಮುಳ್ಳಿನ ಪೊದೆಯಲ್ಲಿ ಬಿಸಾಕಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ತುಮಕುಂಟಾ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯು 30 ವರ್ಷದವನಾಗಿದ್ದಾನೆಂದು ಅಂದಾಜಿಸಲಾಗಿದೆ. ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ. ಹತ್ಯೆಯಾದ ವ್ಯಕ್ತಿಯ ಬಗ್ಗೆ ಅಲ್ಲಿನ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಅಲ್ಲಿನ ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಕಪೀಲ್ ದೇವ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಂಚೋಳಿ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.