ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ (51) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಅವರು ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಅಪರ್ಣಾ ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ.
ಸಿನಿಮಾ & ಸೀರಿಯಲ್ ಸೇರಿದಂತೆ ಕಾಮಿಡಿ ಶೋ ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. 1984ರಲ್ಲಿ ಬಿಡುಗಡೆಯಾದ ‘ಮಸಣದ ಹೂ’ ಸಿನಿಮಾದಲ್ಲಿ ನಟಿಸಿದ್ದರು. ಇತ್ತೀಚೆಗೆ ‘ಇನ್ಸ್ ಸ್ಪೆಕ್ಟರ್ ವಿಕ್ರಮ್ʼ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ, ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.
ನಟಿ ಅಪರ್ಣಾ ಸಾವಿಗೆ ಕ್ಯಾನ್ಸರ್ ಕಾಯಿಲೆಯೇ ಕಾರಣ?
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದಾಗಿ ಅವರು ಬೆಂಗಳೂರಿನ ಬನಶಂಕರಿ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ನಿರೂಪಕಿಯಾಗಿ ಒಂದೇ ಒಂದು ಇಂಗ್ಲಿಷ್ ಪದ ಬಳಸದೇ ಕನ್ನಡದಲ್ಲಿಯೇ ಲೀಲಾಜಾಲವಾಗಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದರು.
ಸೃಜನ್ ಲೋಕೇಶ್ ನಡೆಸಿಕೊಡುವ ಮಜಾ ಟಾಕೀಸ್ ಕಾರ್ಯಕ್ರಮದ ಮೂಲಕ ಕನ್ನಡಿಗರಿಗೆ ಹತ್ತಿರವಾಗಿದ್ದರು. ಕಳೆದ ಕೆಲ ದಿನಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಇದೀಗ ಅದೇ ಕ್ಯಾನ್ಸರ್ ಅವರ ಜೀವ ತೆಗೆದುಬಿಟ್ಟಿದೆ.